ಕಮಲಶಿಲೆ: ದನ ಕಳವು ಯತ್ನ ಪ್ರಕರಣ: ಇಬ್ಬರ ಬಂಧನ

ಉಡುಪಿ: ಕಮಲಶಿಲೆ ದೇವಸ್ಥಾನ ಗೋಶಾಲೆಯ ಬಳಿ ದನ ಕಳವಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಜೂ.22ರಂದು ಬಂಧಿಸಿದ್ದಾರೆ.

ಮಂಗಳೂರು ಬಜ್ಪೆಯ ವಾಜೀದ್ ಜೆ.(26) ಹಾಗೂ ಫೈಜಲ್(40) ಬಂಧಿತ ಆರೋಪಿಗಳು. ಇವರು ಜೂ.16ರಂದು ಬೆಳಗಿನ ಜಾವ ಕಮಲಶಿಲೆ ದೇವಸ್ಥಾನ ಗೋಶಾಲೆಯ ಬಳಿ ದನ ಕಳವು ಮಾಡಲು ಬಂದಿರುವುದಾಗಿ ದೇವಸ್ಥಾನದ ಸೆಕ್ಯೂರಿಟಿ ಗಾರ್ಡ್ ರಾಜು ನೀಡಿದ ದೂರಿನಂತೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಶಂಕರನಾರಾಯಣ ಪೊಲೀಸ್ ಠಾಣಾ ಎಸ್ಸೈಗಳಾದ ನಾಸೀರ್ ಹುಸೇನ್ ಮತ್ತು ಶಂಭುಲಿಂಗಯ್ಯ ಎಂ.ಇ. ಹಾಗೂ ಸಿಬ್ಬಂದಿಗಳು ಆರೋಪಿಗಳನ್ನು ಬಂಧಿಸಿದರು. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ

Latest Indian news

Popular Stories