ಕರ್ಮ ಹಿಂಬಾಲಿಸುತ್ತದೆ, ಪಾಪಕರ್ಮ ಅವನ ಸುಡುತ್ತದೆ’:ದರ್ಶನ್ ಅರೆಸ್ಟ್ ಬೆನ್ನಲ್ಲೇ ಜಗ್ಗೇಶ್ ಮಾರ್ಮಿಕ ಟ್ವೀಟ್

ಬೆಂಗಳೂರು: ನಟ ಜಗ್ಗೇಶ್ ದರ್ಶನ್ ಅರೆಸ್ಟ್ ಬೆನ್ನಲ್ಲೇ ಟ್ವೀಟ್ ಮಾಡಿದ್ದಾರೆ.”ಸರ್ವ ಆತ್ಮಾನೇನ ಬ್ರಹ್ಮ’ ‘ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ನಟ ದರ್ಶನ್ ಬಗ್ಗೆಯೇ ಅವರು ಹೇಳಿದ್ದಾರೆ ಎನ್ನಲಾಗಿದೆ.

ಸರ್ವಆತ್ಮಾನೇನಬ್ರಹ್ಮ ಸರ್ವ ಜೀವಿಯಲ್ಲಿ ದೇವರಿದ್ದಾನೆ ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ! ಕರ್ಮ ಜೀವನನ ಹಿಂದೆ ಹಿಂಬಾಲಿಸುತ್ತದೆ ಅವನ ಪಾಪಕರ್ಮ ಅವನ ಸುಡುತ್ತದೆ! ಕಲಿಯುಗದಲ್ಲಿ ದೇವರು ಕಲ್ಲಲ್ಲಾ ಎಲ್ಲಾ ಕರ್ಮಕ್ಕು ತತಕ್ಷಣ ಪಲಿತಾಂಶ ಉಂಟು! ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ! ಮದಕ್ಕೆ ಕಾರುಣ್ಯದ ಅರಿವಿಲ್ಲಾ!

ಕರ್ಮ ಜೀವನವನ್ನು ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನ ಸುಡುತ್ತದೆ. ಕಲಿಯುಗದಲ್ಲಿ ದೇವರು ಕಲ್ಲಲ್ಲ. ಎಲ್ಲಾ ಕರ್ಮಕ್ಕೂ ತತ್ತಕ್ಷಣ ಫಲಿತಾಂಶ ಉಂಟು. ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ’ ಎಂದು ಅವರು ಬರೆದಿದ್ದಾರೆ.

‘ಮದಕ್ಕೆ ಕಾರುಣ್ಯದ ಅರಿವಿಲ್ಲಾ ಎಂದಿದ್ದಾರೆ.

Latest Indian news

Popular Stories