Crime

ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ – 6ನೇ ಸ್ಥಾನದಲ್ಲಿ ಕರ್ನಾಟಕ

ಬೆಂಗಳೂರು, ಡಿಸೆಂಬರ್ 23 (ಯುಎನ್ಐ) ವಿಶ್ವಸಂಸ್ಥೆಯು ನೀಡಿರುವ ಸುಸ್ಥಿರ ಅಭಿವೃದ್ಧಿಯು 17 ಗುರಿಗಳ ಸಾಧನೆಯಲ್ಲಿ ಕರ್ನಾಟಕವು ದೇಶದಲ್ಲಿ 6 ನೇ ಸ್ಥಾನದಲ್ಲಿದೆ. ಇದನ್ನು ಇನ್ನಷ್ಟು ಉತ್ತಮಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಯೋಜನಾ ಇಲಾಖೆಯು ಸಿದ್ಧ ಪಡಿಸಿರುವ ಇಂದು ಸುಸ್ಥಿರ ಅಭಿವೃದ್ಧಿ ಗುರಿಗಳ ಮುನ್ನೋಟ 2030 ರ ಕ್ರಿಯಾ ಯೋಜನೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬಿಡುಗಡೆ ಮಾಡಿ ಮಾತನಾಡಿದರು.
ಸುಸ್ಥಿರ ಅಭಿವೃದ್ಧಿ ಗುರಿಗಳ ಮುನ್ನೋಟ 2030ರ ಕಾರ್ಯತಂತ್ರ ಮತ್ತು ಕ್ರಿಯಾ ಯೋಜನೆಯು ಮುಂದಿನ 10 ವರ್ಷಗಳ ರಾಜ್ಯದಲ್ಲಿ ಸುಸ್ಥಿರ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಲು ಪೂರಕವಾದ ಮಾರ್ಗಸೂಚಿಗಳನ್ನು ಒದಗಿಸುತ್ತದೆ. ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ ದೃಷ್ಟಿಕೋನವನ್ನು ಅನುಷ್ಠಾನಕ್ಕೆ ತರಲು ಇದು ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button