Crime

ಅಕ್ರಮ ಗಾಂಜಾ ಮಾರಾಟ- ಮೂವರ ಬಂಧನ

ಕೊಡಗು ಜಿಲ್ಲೆಯ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಬಲಮುರಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ.

ಠಾಣಾ ವ್ಯಾಪ್ತಿಯ ಬಲಮುರಿ ಗ್ರಾಮದ ಸೇತುವೆ ಬಳಿಯ ಹೊಳೆಮುಡಿ ಮೈದಾನದ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಠಾಣಾಧಿಕಾರಿ ಶ್ರೀ ಮಂಜುನಾಥ್ ಹಾಗು ಸಿಬ್ಬಂದಿಗಳು ದಾಳಿ ಮಾಡಿ ಬಲಮುರಿ ಗ್ರಾಮದ ನಿವಾಸಿ ಎಸ್.ಎ. ಇರ್ಫಾನ್ (29), ಹೊದ್ದೂರು ವಾಟೆಕಾಡು ಗ್ರಾಮದ ನಿವಾಸಿ ಬಿ. ಎಂ.ಮುಜೀಬ್ ರಹ್ಮಾನ್ (28), ಹಾಗೂ ಬಲಮುರಿ ಗ್ರಾಮದ ಕೆ.ಎಂ.ಅಮೀರ್ (29) ಎಂಬವರನ್ನು ಬಂಧಿಸಿ, ಬಂಧಿತರಿಂದ 275 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಒಂದು ಆಟೋರಿಕ್ಷಾ,ಒಂದು ಸ್ಕೂಟರ್ ಹಾಗೂ ಮೂರು ಮೊಬೈಲ್ ಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಭಾಗಿಯಾದ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳ ಕಾರ್ಯವನ್ನು ಪ್ರಶಂಸಿಸಲಾಗಿದೆ.

ವಿಶೇಷ ಸೂಚನೆ: ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಮತ್ತು ಮಾರಾಟ ಮಾಡುವ ವ್ಯಕ್ತಿಗಳು ಕಂಡು ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ KSP ತಂತ್ರಾಂಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತ್ತೇವೆ. ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button