CrimeKodagu

ಕೊಡಗು ಜಿಲ್ಲೆಯಲ್ಲಿ ವ್ಯಾಪಕ ವಾಗುತ್ತಿರುವ ಗಾಂಜಾ ಪ್ರಕರಣಗಳು ಮತ್ತಿಬ್ಬರು ಆರೋಪಿಗಳ ಬಂಧನ

ಕೊಡಗು: ಜುಲೈ 3ರಂದು ಅಮ್ಮತ್ತಿ ಮುತ್ತಪ್ಪ ದೇವಾಲಯದ ಬಳಿಇರುವ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.

ಅಮ್ಮತ್ತಿ ನಿವಾಸಿ ಎನ್.ಎ ಪೊನ್ನಣ್ಣ(46) ಹಾಗೂ ವಿರಾಜಪೇಟೆ ಸುಂಕದಕಟ್ಟೆ ನಿವಾಸಿ ಹೆಚ್.ಆರ್ ಲೋಹಿತ್ (26) ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳಿಂದ 104 ಗ್ರಾಂ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ.

ವಿರಾಜಪೇಟೆಯ ಡಿವೈಎಸ್ಪಿ ಮೋಹನ್ ಕುಮಾರ್ ,ಸಿಪಿಐ ಬಿ.ಎಸ್ ಶಿವರುದ್ರಪ್ಪ , ಪಿ.ಎಸ್.ಐ ಮಂಜುನಾಥ್ ವಿರಾಜಪೇಟೆ ಗ್ರಾಮಾಂತರ ಠಾಣೆ ಸಿಬ್ಬಂದಿಗಳಿಂದ ಕಾರ್ಯಾಚರಣೆ ನಡೆಸಿದ್ದರು. ಈ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಿಂದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ‌.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button