ಕೃಷ್ಣಾ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ವಿವಿಧ ಕೋರ್ಸುಗಳಿಗೆ ಪ್ರವೇಶ ಪಡೆಯದಿರಲು ಸೂಚನೆ
ಕಲಬುರಗಿ,ಸೆ.30:- ಗುಲಬರ್ಗಾ ವಿಶ್ವವಿದ್ಯಾಲಯದಿಂದ ಗುಲಬರ್ಗಾ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಕಲಬುರಗಿ ನಗರದ ಎಂ.ಎಸ್.ಕೆ. ಮಿಲ್ ರಸ್ತೆಯ ಹೊಸ ಜಿಲಾನಾಬಾದ್ದಲ್ಲಿರುವ ಕೃಷ್ಣಾ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯವು ಮುಂದುವರಿಕೆ ಸಂಲಗ್ನತೆ ಪಡೆಯದೇ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಈ ಮಹಾವಿದ್ಯಾಲಯದಲ್ಲಿ ಬಿ.ಎ., ಬಿ.ಕಾಂ., ಬಿ.ಎಸ್ಸಿ, ಬಿ.ಸಿ.ಎ. ಹಾಗೂ ಬಿ.ಬಿ.ಎಂ. ಕೋರ್ಸುಗಳಿಗೆ ಪ್ರವೇಶಾತಿ ಪಡೆಯಬಾರದೆಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕೃಷ್ಣಾ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರು ತಮ್ಮ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಕೋರ್ಸುಗಳಿಗೆ ಪ್ರವೇಶಾತಿ ಪಡೆಯಬಾರದು. ಒಂದು ವೇಳೆ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಿದ್ದಲ್ಲಿ ಇದಕ್ಕೆ ತಾವೇ ಹೊಣೆಗಾರರಾಗಲಿದ್ದು, ಈ ವಿಷಯದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯವು ಯಾವುದೇ ರೀತಿಯ ಜವಾಬ್ದಾರಿ ತೆಗೆದುಕೊಳ್ಳುವುದಿಲ್ಲ. ವಿದ್ಯಾರ್ಥಿಗಳ ಪಾಲಕರು ಇದನ್ನು ಗಮನಿಸಬೇಕೆಂದು ಅವರು ತಿಳಿಸಿದ್ದಾರೆ.




