Crime

ಹಿರಿಯ ನಟಿ ಲೀಲಾವತಿ ಕನಸಿನ ‘ಪಶು ಆಸ್ಪತ್ರೆ’ ಉದ್ಘಾಟಿಸಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು:ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಟಿ ಲೀಲಾವತಿ ಅವರ ಆಸೆಯಂತೆ ಅವರ ಕನಸಿನ ಪಶು ಆಸ್ಪತ್ರೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಿದ್ದಾರೆ.

ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಸುಸಜ್ಜಿತ ಪಶು ಆಸ್ಪತ್ರೆಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಾಣ ಮಾಡಿರುವ ಲೀಲಾವತಿ ಮತ್ತು ವಿನೋದ್ ರಾಜ್, ಹಿಂದೆ ಜನರಿಗಾಗಿ ಮತ್ತೊಂದು ಆಸ್ಪತ್ರೆಯನ್ನೂ ನಿರ್ಮಿಸಿದ್ದರು. ಈ ಆಸ್ಪತ್ರೆಯನ್ನೂ ಸರಕಾರವೇ ನೋಡಿಕೊಳ್ಳುತ್ತಿದೆ. ಬೆಂಗಳೂರಿನ ಥಣಿಸಂದ್ರದ ಪಶು ಆಸ್ಪತ್ರೆಯನ್ನು ಸರಕಾರ ಸೋಲದೇವನಹಳ್ಳಿಗೆ ಶಿಪ್ಟ್ ಮಾಡಿ ಆದೇಶ ಹೊರಡಿಸಿತ್ತು.

ಡಿಸಿಎಂ ಡಿಕೆ ಶಿವಕುಮಾರ್ ಹಿರಿಯ ನಟಿ ಲೀಲಾವತಿ ಅವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು. ಇತ್ತೀಚಿನ ದಿನಗಳಲ್ಲಿ ಅನೇಕ ನಟ, ಗಣ್ಯರು ಸೋಲದೇವನಹಳ್ಳಿಗೆ ತೆರಳಿ ಆರೋಗ್ಯ ವಿಚಾರಿಸುತ್ತಿದ್ದಾರೆ. ನಟ ದರ್ಶನ್, ಧ್ರುವ ಸರ್ಜಾ ಸೇರಿದಂತೆ ಹಲವರು ಲೀಲಾವತಿ ಅವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button