
Crime
ವಿಧಾನ ಪರಿಷತ್ ಉಪಚುನಾವಣೆ | ನಿರೀಕ್ಷೆಯಂತೆ ಬಿಜೆಪಿಗೆ ಸುಲಭ ಗೆಲುವು
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ನಿರೀಕ್ಷೆಯಂತೆ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಸುಲಭ ಗೆಲುವು ಸಾಧಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು, ಅದರಂತೆ ಇಂದು ಗುರುವಾರ(ಅ.24) ಚುನಾವಣಾ ಫಲಿತಾಂಶ ಹೊರಬಿದ್ದಿದೆ.
ಕಾಂಗ್ರೆಸ್ ನ ರಾಜು ಪೂಜಾರಿ ಅವರಿಗಿಂತ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.




