
Crime
ಮೆಗಾ ಲೋಕ್ ಅದಾಲತ್ ಗೆ ರಾಜ್ಯಾದ್ಯಂತ ಏಕ ಕಾಲದಲ್ಲಿ ಚಾಲನೆ
ಬೆಂಗಳೂರು ಡಿ 12 (ಯುಎನ್ಐ) ಕಾನೂನು ಸೇವೆಗಳ ಪ್ರಾಧಿಕಾರಗಳ ದ್ಯೇಯೋದ್ದೇಶ ಸರ್ವರಿಗೂ ನ್ಯಾಯ ” ಎಂಬುದಾಗಿದೆ. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಧಾರವಾಡ ಹಾಗೂ ಕಲಬುರಗಿ ಪೀಠಗಳಲ್ಲಿ ಏಕಕಾಲಕ್ಕೆ “ ಇ-ಲೋಕ್ ಅದಾಲತ್ ” ನಡೆಸಲು ಉದ್ದೇಶಿಸಿದೆ ಎಂದು ರಾಜ್ಯ ಹೈಕೋಟ್ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಅರವಿಂದ್ ಕುಮಾರ್ ಹೇಳಿದ್ದಾರೆ.
ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳು ಈ ಸದವಕಾಶವನ್ನು ಉಪಯೋಗಿಸಿ ಕೊಳ್ಳುವಂತೆ ಸಲಹೆ ಮಾಡಿದ್ದಾರೆ.
ನಗರದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಹಮ್ಮಿಕೊಂಡಿದ್ದ ಮೆಗಾ ಲೋಕ್ ಅದಾಲತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಅವರು ಇ-ಜನತಾ ನ್ಯಾಯಾಲಯದಲ್ಲಿ ಉಭಯ ಕಕ್ಷಿದಾರರು ನ್ಯಾಯಾಲಯಕ್ಕೆ ಖುದ್ದಾಗಿ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿರುತ್ತದೆ ಎಂದು ತಿಳಿಸಿದರು.




