Crime

ಮಹಾಗಾಂವ ಮೊದಲನೇ ಕ್ರಾಸ್‍ನಲ್ಲಿ ಅಂಗನವಾಡಿ ಕೇಂದ್ರದ ಉದ್ಘಾಟನೆ

ಕಲಬುರಗಿ.ಸೆ.30:-ಶಿಶು ಅಭಿವೃದ್ಧಿ ಯೋಜನೆ ಕಲಬುರಗಿ ಗ್ರಾಮೀಣದ ಮಹಾಗಾಂವ ಮೊದಲನೇ ಕ್ರಾಸ್‍ನಲ್ಲಿರುವ ಅಂಗನವಾಡಿ ಕೇಂದ್ರದ ಹೊಸ ಕಟ್ಟಡವನ್ನು ಕಲಬುರಗಿ ಗ್ರಾಮೀಣ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಡಾ. ವಿಜಯಲಕ್ಷ್ಮಿ ಹೇರೂರ ಅವರು ಮಂಗಳವಾರ ಉದ್ಘಾಟಿಸಿದರು.
ನಂತರ ಅವರು ಮಾತನಾಡಿ ಮನೆಯೇ ಮೊದಲ ಪಾಠಶಾಲೆ ಮತ್ತು ಅಂಗನವಾಡಿ ಕೇಂದ್ರವೇ ಮೊದಲ ಶಿಕ್ಷಣ ಕೇಂದ್ರವಾಗಿದೆ. ಅಂಗನವಾಡಿ ಕೇಂದ್ರಕ್ಕೆ ಬರುವ 3 ರಿಂದ 6 ವರ್ಷದೊಳಗಿನ ಮಕ್ಕಳನ್ನು ಉತ್ತಮವಾಗಿ ನೋಡಿಕೊಳ್ಳಬೇಕೆಂದರು.
ಪ್ರಾರಂಭದಲ್ಲಿ ವಲಯ ಮೇಲ್ವಿಚಾರಕಿ ಸುನೀತಾ ಬಿ.ಎಸ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮಹಾಗಾಂವ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಭಾಗವಹಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button