CrimeFeatured Story

ಮಲ್ಪೆ: ಕೋ ಆಪರೇಟಿವ್ ಬ್ಯಾಂಕ್ ನ ವ್ಯವಸ್ಥಾಪಕ ಆತ್ಮಹತ್ಯೆ

ಮಲ್ಪೆ: ಇಲ್ಲಿನ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ನ ಶಾಖಾ ವ್ಯವಸ್ಥಾಪಕ ಲಾಡ್ಜ್ ನಲ್ಲಿ ನೇಣು ಬಿಗಿದು
ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ಬೆಳಕಿಗೆ ಬಂದಿದೆ.

IMG 20230308 214818 Crime, Featured Story

ಉಡುಪಿ ಮಂಗಳೂರು ಭಾಗದಲ್ಲಿ ಕಾರ್ಯಚರಿಸುತ್ತಿರುವ ಕೋ ಆಪರೇಟಿವ್ ಬ್ಯಾಂಕ್ ನ
ಮಲ್ಪೆ ಶಾಖೆಯ ವ್ಯವಸ್ಥಾಪಕ ಸಾಲಿಗ್ರಾಮದ ನಿವಾಸಿ, ಪ್ರಸ್ತುತ ತೆಂಕನಿಡಿಯೂರಿನಲ್ಲಿ ವಾಸವಾಗಿರುವ
ಸುಬ್ಬಣ್ಣ (43) ಮಲ್ಪೆಯ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ

ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button