ಮಲ್ಪೆ: ಆಳ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡು ಮೀನುಗಾರರೊಬ್ಬರು ಮೃತಪಟ್ಟಿದ್ದಾರೆ.
ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಇಂದು ಬೆಳಗ್ಗಿನ ಜಾವ 02:30 ಗಂಟೆ ಸುಮಾರಿಗೆ 27 ನಾಟಿಕಲ್ಲ್ ದೂರ ಸಮುದ್ರದಲ್ಲಿ ಬೋಟಿನ ಕಲಾಸಿ ಮ್ಯಾಥೀವ್(52) ರವರು ಬಲೆ ಕೆಲಸ ಮಾಡುತ್ತಿದ್ದರು. ಏಕಾಏಕಿ ಎದೆ ನೋವು ಎಂದು ಅಲ್ಲೇ ಕುಸಿದು ಬಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ಬೋಟಿನಲ್ಲಿ ವಾಪಾಸು ಕರೆ ತಂದು ಆಸ್ಪತ್ರೆಗೆ ದಾಖಲಿಸಿದಾಗ ಮೃತಪಟ್ಟಿರುವುದು ಧೃಡ ಪಟ್ಟಿದೆ.
ಈ ಬಗ್ಗೆ ಮಲ್ಪೆ ಠಾಣಾ ಯು.ಡಿ.ಆರ್ ನಂಬ್ರ 11/2024 ಕಲಂ 174 ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಿಸಲಾಗಿದೆ.