ಮಂಗಳೂರು: MDMA ಸಾಗಿಸುತ್ತಿದ್ದ ನಾಲ್ವರ ಸೆರೆ

ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎನ್ನು ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಬಂಧಿತರಿಂದ 270 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳಲಾಗಿದೆ.

ಮೊಹಮ್ಮದ್ ಅಮೀನ್ ರಾಫಿ(23), ಮೊಹಮ್ಮದ್ ಸಿನಾನ್ ಅಬ್ದುಲ್ಲಾ(23), ಮೊಹಮ್ಮದ್ ನೌಮಾನ್(22), ಮೊಹಮ್ಮದ್ ಸಫೀಲ್(23) ಬಂಧಿತರು.

ಬಂಧಿತರಿಂದ 6,50,000/- ರೂ ಮೌಲ್ಯದ 270 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 4 ಮೊಬೈಲ್ ಫೋನ್ ಗಳು, ಟೊಯೊಟಾ ಕೊರೊಲ್ಲಾ ಕಾರು, ಡಿಜಿಟಲ್ ತೂಕ ಮಾಪಕ ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 14,85,500/- ಆಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿ ಎಂಡಿಎಂಎ‌ ಸಾಗಿಸುತ್ತಿದ್ದ ವೇಳೆ ನಗರದ ಹೊರ ವಲಯದ ದೇರಳಕಟ್ಟೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬೆಂಗಳೂರಿನಿಂದ ಎಂಡಿಎಂಎ ನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Latest Indian news

Popular Stories