ಮಂಗಳೂರು: ಮೊಬೈಲ್ ಕಳವು ಮಾಡಿದಾತನಿಗೆ ಮೂರು ವರ್ಷ ಜೈಲು ಶಿಕ್ಷೆ

ಮಂಗಳೂರು: ಬಾಲಕಿಯರ ವಸತಿ‌ ನಿಲಯದಿಂದ ಮೊಬೈಲ್ ಕಳ್ಳತನ‌ ಮಾಡಿದ ಆರೋಪಿಗೆ ಮಂಗಳೂರಿನ ಸಿಜೆಎಂ ನ್ಯಾಯಾಲಯವು ಮೂರು ವರ್ಷ ಜೈಲು ಶಿಕ್ಷೆ ಮತ್ತು 5000 ರೂ. ದಂಡ ವಿಧಿಸಿ ಆದೇಶಿಸಿದೆ.

ಪ್ರಕರಣದ ವಿವರ: 2023ರ ಜೂನ್18ರಂದು ನಗರದ ಉರ್ವದ ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ಒಳಗೆ ಮಹೇಶ್ ಪೈ ಎಂಬಾತನು ಪ್ರವೇಶಿಸಿ ವಿದ್ಯಾರ್ಥಿನಿಯರ 3 ಮೊಬೈಲ್ ಫೋನ್ ಗಳನ್ನು ಕಳವು ಮಾಡಿದ್ದನು. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಹಾಜಪಡಿಸಿ, ದೋಷರೋಪಣಾ ಪಟ್ಟಿಸಲ್ಲಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ ಮತ್ತು 5000 ರೂ. ದಂಡ ವಿಧಿಸಿ ಆದೇಶಿಸಿದೆ.

Latest Indian news

Popular Stories