Crime

ಮಣಿಪಾಲ: ಗಾಂಜಾ ಸೇವನೆ – ಪ್ರಕರಣ ದಾಖಲು

ಮಣಿಪಾಲ: ಗಾಂಜಾ ಸೇವಿಸಿದ ಅಮಲಿನಲ್ಲಿದ್ದ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ‌

ಅ. 14 ರಂದು ನಾಗೇಶ, ಸಹಾಯಕ ಪೊಲೀಸ್‌ ಉಪನಿರೀಕ್ಷಕರು, ಮಣಿಪಾಲ ಪೊಲೀಸ್‌ ಠಾಣೆ ಇವರಿಗೆ ಉಡುಪಿ ಡಿ ಸಿ ಆಪೀಸ್‌ ಬಳಿ ಓರ್ವ ವ್ಯಕ್ತಿ ಅಮಲಿನಲ್ಲಿದ್ದ ಬಗ್ಗೆ ಮಾಹಿತಿ ಬಂದಿದೆ.. ಸ್ಥಳಕ್ಕೆ ಹೋದಾಗ ಅಲ್ಲಿ ಮೊಹಮ್ಮದ್‌ ಫರವೇಜ್‌ ಉಮ್ಮರ್‌ (25) ಎಂಬಾತನು ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಅನುಮಾನದ ಮೇರೆಗೆ ಆತನನ್ನು ಮಣಿಪಾಲ ಕೆ ಎಂ ಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಲಾಗಿತ್ತು.

ದಿನಾಂಕ 18/10/2024 ರಂದು ಮೊಹಮ್ಮದ್‌ ಫರವೇಜ್‌ ಉಮ್ಮರ್‌ ಮಾದಕ ವಸ್ತು ಗಾಂಜಾವನ್ನು ಸೇವಿಸಿರುವ ಬಗ್ಗೆ ಮಣಿಪಾಲ ಕೆ ಎಂ ಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಗಳ ದೃಢಪತ್ರ ನೀಡಿರುತ್ತಾರೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 239/2024 ಕಲಂ: 27 (B) NDPS ಕಾಯ್ದೆ ಯಂತೆ ಪ್ರಕರಣ ದಾಖಲಾಗಿರುತ್ತದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button