ಮಣಿಪಾಲ: ಗಾಂಜಾ ಸೇವಿಸಿದ ಆರೋಪದಡಿಯಲ್ಲಿ ಇಬ್ಬರು ಯುವಕರ ಮೇಲೆ ಪ್ರಕರಣ ದಾಖಲಾಗಿದೆ.
ಮಣಿಪಾಲ ಪೊಲೀಸ್ ಠಾಣಾ ಉಪನಿರೀಕ್ಷಕರಾದ ರಾಘವೇಂದ್ರ. ಸಿ ರವರು ಸಾರ್ವಜನಿಕ ಸ್ಥಳದಲ್ಲಿ ರೌಂಡ್ಸ್‌ಕರ್ತವ್ಯದಲ್ಲಿರುವಾಗ ಜ್ಞಾನೇಶ್ (25) ಮತ್ತು ಮಂಜುನಾಥ (25) ಎರಡು ಪ್ರತ್ಯೇಕ ಪ್ರಕರಣದಲ್ಲಿ ಅಮಲಿನಲ್ಲಿದ್ದು ಅವರು ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಅನುಮಾನದ ಮೇರೆಗೆ ಮಣಿಪಾಲ ಕೆಎಂಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಲು ಕಳುಹಿಸಿಕೊಟ್ಟಿದ್ದು ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.