
ಮಣಿಪಾಲ, ಸೆ. 24: ಮಣಿಪಾಲದ ಎಂಐಟಿ ಕಾಲೇಜಿನ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಯೋರ್ವರು ಮಣಿಪಾಲದಲ್ಲಿರುವ ತಮ್ಮ ಬಾಡಿಗೆ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ. 22ರ ರಾತ್ರಿ ನಡೆದಿದೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ವಿನೋಬನಗರ ನಿವಾಸಿ, ಸಮರ್ಥ್ ಆರ್. ಪಾಟೀಲ್ (22) ಎಂದು ಗುರುತಿಸಲಾಗಿದೆ. ಇವರು ವೈಯಕ್ತಿಕ ಕಾರಣದಿಂದ ಮನನೊಂದು ಕೊಠಡಿಯ ಹಾಲ್ನ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




