ಬ್ರಿಟನ್ ರಾಜ 3 ನೇ ಚಾರ್ಲ್ಸ್ ಶೀಘ್ರ ಗುಣಮುಖರಾಗಲಿ : ಶುಭ ಹಾರೈಸಿದ ಪ್ರಧಾನಿ ಮೋದಿ

ಲಂಡನ್: ಕ್ಯಾನ್ಸರ್ ನಿಂದ ಬಳಲುತ್ತಿರುವ ಬ್ರಿಟನ್ ರಾಜಕುಮಾರ ಚಾರ್ಲ್ಸ್ 3 ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ‘ಘನತೆವೆತ್ತ ದೊರೆ ಮೂರನೇ ಚಾರ್ಲ್ಸ್ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಕಿಂಗ್ ಚಾರ್ಲ್ಸ್ ಅವರಿಗೆ ಪ್ರಾಸ್ಟೇಟ್ ಹಿಗ್ಗುವಿಕೆಯ ಶಸ್ತ್ರಚಿಕಿತ್ಸೆಯ ನಂತರ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ ಎಂದು ಬಕಿಂಗ್ಹ್ಯಾಮ್ ಅರಮನೆ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ. 75 ವರ್ಷದ ದೊರೆ ಕಳೆದ ತಿಂಗಳು ಲಂಡನ್ ಕ್ಲಿನಿಕ್ನಲ್ಲಿ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಜನವರಿ 17 ರಂದು ಅವರಿಗೆ ಹಾನಿಕಾರಕ ಸ್ಥಿತಿ ಇರುವುದು ಪತ್ತೆಯಾಯಿತು. ಕಿಂಗ್ ಚಾರ್ಲ್ಸ್ ಚಿಕಿತ್ಸೆಯನ್ನು ಪ್ರಾರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ.

Latest Indian news

Popular Stories