Crime
ಸಚಿವ ಸಂಪುಟ ಪುನರ್ ರಚನೆ: ತೀವ್ರಗೊಳ್ಳಲಿದೆ ಆಕಾಂಕ್ಷಿಗಳ ಲಾಬಿ…!!!
ಬೆಂಗಳೂರು,ಸೆ.28(ಯುಎನ್‍ಐ):- ವಿಧಾನಮಂಡಲ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಮತ್ತೆ ದೆಹಲಿ ಪ್ರವಾಸಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೆಡಿಯಾಗಿದ್ದು, ಇದೀಗ ಮತ್ತೊಮ್ಮೆ ಸಚಿವ ಸಂಪುಟ ಪುನರ್ ರಚನೆ ಹುತ್ತಕ್ಕೆ ಕೈ ಹಾಕಿದ್ದಾರೆ.
ಬಹುತೇಕ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ದೆಹಲಿ ವರಿಷ್ಠರನ್ನು ಭೇಟಿಯಾಗಿ ಸಂಪುಟ ಪುನರ್ ರಚಿಸಲು ಮುಂದಾಗಿದ್ದಾರೆ.
ತಮ್ಮ ಸಚಿವ ಸಂಪುಟದಿಂದ ನಾಲ್ಕೈದು ಮಂದಿಯನ್ನು ಕೈಬಿಟ್ಟು ಹಲವರಿಗೆ ಅವಕಾಶ ದೊರಕಿಸಿಕೊಡುವ ಆಲೋಚನೆ ಯಡಿಯೂರಪ್ಪ ಅವರದ್ದಾಗಿದ್ದು, ಇದಕ್ಕಾಗಿ ವರಿಷ್ಠರ ಹಸಿರು ನಿಶಾನೆಗಾಗಿ ದೆಹಲಿಯತ್ತ ಮುಖ ಮಾಡಿದ್ದಾರೆ.




