CrimeDakshina Kannada

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ

ಮಂಗಳೂರು, ಮೇ 20: ನಗರದ ಆಸ್ಪತ್ರೆಯೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದ ಬಾಲಕಿ ಮೇ 15 ರಿಂದ ನಾಪತ್ತೆಯಾಗಿದ್ದಾಳೆ.

ಪ್ರಥಮ ವರ್ಷದ ನರ್ಸಿಂಗ್ ಓದುತ್ತಿದ್ದ ಅಸ್ಮಾ ಬಾನು (18) ಮೇ 15 ರಿಂದ ನಾಪತ್ತೆಯಾಗಿದ್ದಾರೆ.

ಬಾನು ಮೇ 15ರಂದು ಬೆಳಗ್ಗೆ 9.15ಕ್ಕೆ ಆಸ್ಪತ್ರೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದರು. ಆದರೆ, ಆಕೆ ವಾಪಸ್ ಬಂದಿಲ್ಲ ಮತ್ತು ಎಲ್ಲಿದ್ದಾಳೆ ಎಂಬುದು ತಿಳಿದುಬಂದಿಲ್ಲ.

ಬಾನು ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳನ್ನು ಮಾತನಾಡಬಲ್ಲಳು. ಆಕೆಯ ತಂದೆ ಮಹಮ್ಮದ್ ಖಾಲಿಕ್ ನಗರದ ಪೂರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಅಸ್ಮಾ ಬಾನು ಪತ್ತೆಯಾದಲ್ಲಿ ಪೂರ್ವ ಪೊಲೀಸ್ ಠಾಣೆಯನ್ನು 0824-2220520 ಅಥವಾ ಜಿಲ್ಲಾ ನಿಯಂತ್ರಣ ಕೊಠಡಿ 2220800 ಅಥವಾ 2220801 ಗೆ ಸಂಪರ್ಕಿಸಲು ಕೋರಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button