ಶಾಸಕ ಸೈಲ್‌ ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯುನಿಕೇಶನ್ ಅಂಡ್ ಅಡ್ವಟೈಜ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ

ಕಾರವಾರ: ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯುನಿಕೇಶನ್ ಅಂಡ್ ಅಡ್ವಟೈಜ್ ಲಿಮಿಟೆಡ್‌ ಅಧ್ಯಕ್ಷರಾಗಿ ಸೋಮವಾರ ಶಾಸಕ ಸತೀಶ್ ಸೈಲ್ಬೆಂಗಳೂರು ಕೆಎಸ್ಎಮ್ ಸಿ ಎಲ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಅಧಿಕಾರ ಸ್ವೀಕಾರದ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಕೆಎಸ್ಎಮ್ ಸಿ ಎಲ್ ಅಧ್ಯಕ್ಷ ಸೈಲ್ ಈ ಹೆಮ್ಮೆಯ ಸಂಸ್ಥೆಗೆ ನನ್ನನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಕರ್ನಾಟಕ ಸರ್ಕಾರಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಕರ್ನಾಟಕ ಸರ್ಕಾರವು ಈ ಸಂಸ್ಥೆಯನ್ನು ಸರ್ವರೀತಿಯಲ್ಲೂ ಪ್ರಗತಿಪರವಾಗಿ ಮುನ್ನಡೆಸಲು ಸರ್ಕಾರವು ತಮಗೆ ವಹಿಸಿದೆ. ಈ ಜವಾಬ್ದಾರಿಯನ್ನು ನಾನು ಅತ್ಯಂತ ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದರು.

ಸಂಸ್ಥೆಯ ಅಭಿವೃದ್ಧಿಗೆ ಸರ್ಕಾರದಿಂದ ಆಗಬೇಕಾಗಿರುವ ಎಲ್ಲಾ ಸ್ಥರದ ಕಾರ್ಯಗಳನ್ನು ಸಕಾಲದಲ್ಲಿ ಮಾಡಿಸುವುದರ ಜೊತೆ, ಸರ್ಕಾರದ ಬೆಂಬಲವನ್ನು ಪಡೆದು ಅತ್ಯಂತ ಪ್ರಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ, ಇದು ನನ್ನ ಗುರಿ ಎಂದರು.

ಸಂಸ್ಥೆಯ ಅಭಿವೃದ್ಧಿಗೆ ಅಗತ್ಯವಾದ ವಿಚಾರಗಳ ಬಗ್ಗೆ ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಹಕರುಗಳ ಜೊತೆ ಚರ್ಚಿಸಿ ಅವರುಗಳ ನಿರೀಕ್ಷೆಯಂತೆ ಕಾರ್ಯ ನಿರ್ವಹಿಸಿ, ಸಂಸ್ಥೆಯ ಸರ್ವತೋಮುಖ ಅಭಿವೃದ್ಧಿಯ ಜೊತೆ ಸಮಾಜಮುಖಿ ಕೆಲಸ ಮಾಡುವುದರಲ್ಲಿಯೂ ತೊಡಗಿಸಿಕೊಳ್ಳುವುದಾಗಿ ತಿಳಿಸಿದರು. ನಿಗಮದ ಎಂಡಿ ಸಿದ್ದಲಿಂಪ್ಪ ಪೂಜಾರಿ, ಸಹಾಯಕ ವ್ಯವಸ್ಥಾಪಕ ನಿರ್ದೇಶಕಿ ಲತಾ ನಾಯ್ಕ , ಮುಂತಾದ ಅಧಿಕಾರಿ ವರ್ಗ ಉಪಸ್ಥಿತರಿದ್ದರು.

Latest Indian news

Popular Stories