Crime

ಹಾನಗಲ್’ನಲ್ಲಿ ಅನೈತಿಕ ಪೊಲೀಸ್​ಗಿರಿ | ಮಹಿಳೆಯೊಂದಿಗೆ ಸಿಕ್ಕಿಬಿದ್ದ ವ್ಯಕ್ತಿಗೆ ಥಳಿತ | ಇಬ್ಬರ ಬಂಧನ

ಹಾವೇರಿ: ಹಾವೇರಿ ಜಿಲ್ಲೆಯ ಹಂಗಲ್‌ನಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅನ್ಯ ಕೋಮಿನ ಮಹಿಳೆಯೊಂದಿಗೆ ಲಾಡ್ಜ್​ಗೆ ಬಂದಿದ್ದ ಯುವಕನಿಗೆ 12 ಮಂದಿಯಿಂದ ತಂಡವೊಂದು ಥಳಿಸಿರುವ ಘಟನೆ ಜ.7ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಜ.7ರಂದು ಹಾನಗಲ್ಲ ಸಮೀಪದ ನಾಲ್ಕರ ಕ್ರಾಸ್ ಬಳಿಯ ಲಾಡ್ಜ್​ಗೆ ಶಿರಸಿ ಮೂಲದವರೆನ್ನಲಾದ ಅನ್ಯ ಕೋಮಿನ ಯುವತಿಯೊಂದಿಗೆ ಯುವಕನೋರ್ವ ಆಗಮಿಸಿರುವ ಮಾಹಿತಿ ಪಡೆದ ಯುವಕರ ಗುಂಪು ಲಾಡ್ಜ್​ಗೆ ನುಗ್ಗಿ ಯುವಕ-ಯುವತಿಯ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ನಂತರ ಯುವತಿಯನ್ನು ಅಜ್ಞಾತ ಸ್ಥಳವೊಂದಕ್ಕೆ ಕೊಂಡೊಯ್ದ ಯುವಕರು, ಮಾನಸಿಕ ಕಿರುಕುಳ ಸೇರಿದಂತೆ ದೈಹಿಕ ಹಲ್ಲೆ ನಡೆಸಿರುವುದಾಗಿ ಯುವತಿ ಹಾಗೂ ಆಕೆಯ ಪತಿ ಆರೋಪಿಸಿದ್ದಾರೆ. ಈ ಸಂಬಂಧ ಯುವತಿಯ ಕುಟುಂಬಸ್ಥಲು ಹಾನಗಲ್ ಪೊಲೀಸರಿಗೆ ದೂರು ನೀಡಿದ್ದು, ದೂರು ಅನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಉಳಿದ ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button