Crime

ಮುಂಬೈ : ಟೆಂಪೋ ಕಂಟೈನರ್ ಗೆ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಮೃತ್ಯು 23 ಮಂದಿಗೆ ಗಾಯ

ಮುಂಬೈ :ಮಹಾರಾಷ್ಟ್ರದ ಸಮೃದ್ಧಿ ಎಕ್ಸ್‌ಪ್ರೆಸ್ ವೇಯಲ್ಲಿ ಟೆಂಪೋ ಟ್ರಾವೆಲರ್‌ ಹಾಗೂ ಕಂಟೈನರ್‌ಗೆ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 12 ಜನ ಮೃತಪಟ್ಟಿದ್ದು , 23 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವೇಗವಾಗಿ ಬಂದ ಟಿಟಿ ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬೇಕಾರತೆ ಸಿ.ಸಿ.ಟಿವಿ ಯಲ್ಲಿ ಸೆರೆಯಾಗಿದೆ.ಇದರಲ್ಲಿ ಒಟ್ಟು 35 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.12 ಪ್ರಯಾಣಿಕರು ಸಾವನ್ನಪ್ಪಿದ್ದು, ಅದರಲ್ಲಿ ಐವರು ಪುರುಷರು, ಆರು ಮಹಿಳೆಯರು ಮತ್ತು ಒಬ್ಬಳು ಅಪ್ರಾಪ್ತ ಬಾಲಕಿ ಎಂದು ಗುರುತಿಸಲಾಗಿದೆ. ಉಳಿದ 23 ಮಂದಿ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button