
Crime
ಮಸ್ಕಿ ವಿಧಾನಸಭೆ ಉಪಚುನಾವಣೆ, ಬಿಜೆಪಿ ನಾಮಪತ್ರ
ಮಸ್ಕಿ : ಮಸ್ಕಿ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಮುನ್ನ ಪ್ರತಾಪಗವಡ ಅವರು, ಮಸ್ಕಿಯ ಅಂಕಲಿಮಠ, ಗಚ್ಚಿನಮಠದಲ್ಲಿ ದರ್ಶನ ಪಡೆದರು. ನಂತರ ಬಿಜೆಪಿ ಕಚೇರಿಗೆ ತೆರಳಿದರು. ನಂತರ ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿನ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಕೇವಲ ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ.




