ಮೈಸೂರು | ಮುಡಾ ಕಚೇರಿ ಮೇಲೆ ಈಡಿ ದಾಳಿ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ಹೊತ್ತಲ್ಲೇ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಈಡಿ) ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.

ಆರ್​ಐಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನೀಡಿರುವ ದೂರಿನ ಆಧಾರದ ಮೇಲೆ ಈಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಈಡಿಯ 20ಕ್ಕೂ ಹೆಚ್ಚು ಸಿಬ್ಬಂದಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.

Latest Indian news

Popular Stories