ದೇವಸ್ಥಾನದ ಆವರಣದಲ್ಲಿ ನಮಾಜ್ ಮಾಡಿದ ಆರೋಪ | ತಾಯಿ, ಮಗಳ ಬಂಧನ

ಬರೇಲಿ: ಶಿವ ದೇವಸ್ಥಾನದಲ್ಲಿ ನಮಾಜ್ ಮಾಡಿದ ಆರೋಪದ ಮೇಲೆ 38 ವರ್ಷದ ಮಹಿಳೆ ಮತ್ತು ಆಕೆಯ ಮಗಳನ್ನು ಉತ್ತರ ಪ್ರದೇಶದ ಬರೇಲಿಯಲ್ಲಿ ಭಾನುವಾರ ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಓರ್ವ ಧರ್ಮಗುರುವನ್ನು ಕೂಡ ಬಂಧಿಸಲಾಗಿದೆ. ಶುಕ್ರವಾರ ಈ ಘಟನೆ ನಡೆದಿದೆ ಎಂದು ಆರೋಪಿಸಿ ಕೇಸರಪುರ ಗ್ರಾಮದ ಮುಖ್ಯಸ್ಥನ ಪತಿ ಪ್ರೇಮ್ ಸಿಂಗ್ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಧರ್ಮಗುರುಗಳ ಸಲಹೆಯ ಮೇರೆಗೆ ಮಹಿಳೆ ಮತ್ತು ಅವರ ಮಗಳು ದೇವಸ್ಥಾನದ ಆವರಣದಲ್ಲಿ ನಮಾಜ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಆ ಪ್ರದೇಶದ ಸರ್ಕಲ್ ಆಫೀಸರ್ (ಸಿಒ) ಗೌರವ್ ಸಿಂಗ್ ಮಾಹಿತಿ ನೀಡಿದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಪ್ರಕರಣದಲ್ಲಿ ನಜೀರಾ (38) ಆಕೆಯ ಮಗಳು ಸಬೀನಾ (19) ಮತ್ತು ಧರ್ಮಗುರು ಚಮನ್ ಶಾ ಮಿಯಾನ್ ಅವರನ್ನು ಬಂಧಿಸಿದ್ದೇವೆ ಎಂದು ಅವರು ಹೇಳಿದರು.

ಪ್ರೇಮ್ ಸಿಂಗ್ ನೀಡಿದ ದೂರಿನ ಆಧಾರದ ಮೇಲೆ, ಐಪಿಸಿ ಸೆಕ್ಷನ್ 295 ಎ (ಒಂದು ಸಮುದಾಯದ ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ಕೃತ್ಯ) ಮತ್ತು 120 ಬಿ (ಅಪರಾಧದ ಪಿತೂರಿ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ತನಿಖೆ ಪ್ರಾರಂಭಿಸಲಾಗಿದೆ.  ಬಂಧನದ ನಂತರ ಮೂವರನ್ನು ಜೈಲಿಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

Latest Indian news

Popular Stories