Crime

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣ: ಸಾಕ್ಷ್ಯ ವಿಚಾರಣೆಯ ಆಡಿಯೋ, ವೀಡಿಯೋ ಮಾಡಲು ಆರೋಪಿ ಪರ ವಾದ ಮಂಡನೆ

ಉಡುಪಿ, ಜ.31: ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂದು ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಇಂದು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಾದ ಪ್ರತಿವಾದಗಳನ್ನು ಮಂಡಿಸಲಾಯಿತು.

ಬೆಂಗಳೂರು ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅರ್ಜಿ ಸಂಬಂಧ ಆರೋಪಿ ಪರ ವಕೀಲರು ಹಾಗೂ ವಿಶೇಷ ಸರಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಕೆ. ವಾದಗಳನ್ನು ಮಂಡಿಸಿದರು. ಇಬ್ಬರ ವಾದಗಳನ್ನು ನ್ಯಾಯಾಧೀಶ ಸಮಿವುಲ್ಲಾ ಆಲಿಸಿದರು. ಈ ಬಗ್ಗೆ ಅಂತಿಮ ತೀರ್ಪನ್ನು ನ್ಯಾಯಾಧೀಶರು ಮುಂದೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ಪ್ರಕರಣದ ಆರೋಪಿ ಚೌಗುಲೆ ಕೃತ್ಯಕ್ಕೆ ಬಳಸಿದ ಕಾರನ್ನು ಸಾಲ ಪಾವತಿಸದ ಹಿನ್ನೆಲೆಯಲ್ಲಿ ತಮ್ಮ ವಶಕ್ಕೆ ನೀಡುವಂತೆ ಬ್ಯಾಂಕಿನವರು ಕೋರ್ಟ್‌ಗೆ ಅರ್ಜಿ ಹಾಕಿದ್ದಾರೆ. ಸದ್ಯ ಕೃತ್ಯಕ್ಕೆ ಬಳಸಿದ ಆರೋಪಿ ಕಾರು ಪೊಲೀಸರ ವಶದಲ್ಲಿ ಇದೆ. ಆ ಬಗ್ಗೆ ವಿಶೇಷ ಸರಕಾರಿ ಅಭಿಯೋಜಕರು ಆಕ್ಷೇಪಣೆ ಹಾಗೂ ಮುಂದಿನ ವಿಚಾರಣೆಗೆ ಫೆ.7ಕ್ಕೆ ದಿನಾಂಕ ನಿಗದಿಪಡಿಸಿ ನ್ಯಾಯಾಧೀಶರು ಆದೇಶ ನೀಡಿದರು

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button