ನೇಜಾರು ಕೊಲೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ‌ ವಿಸ್ತರಣೆ

ಉಡುಪಿ, ಫೆ.7: ನೇಜಾರು ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯ ನ್ಯಾಯಾಂಗ ಬಂಧನ ಅವಧಿಯನ್ನು ಫೆ.12ರವರೆಗೆ ವಿಸ್ತರಿಸಿ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

ಇಂದಿಗೆ ಆರೋಪಿಯ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಯ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ಆದೇಶ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ.ನದಾಫ್ ಹಾಜರಿದ್ದರು

Latest Indian news

Popular Stories