
CrimeDakshina Kannada
ಹೊಸ ವರ್ಷಾಚರಣೆ ಪಾರ್ಟಿಯಲ್ಲಿ ಘರ್ಷಣೆ: ಯುವಕನ ಮೂಗು ಕಚ್ಚಿದ ಸ್ನೇಹಿತ
ಬೆಳ್ತಂಗಡಿ: ಹೊಸ ವರ್ಷದ ಪಾರ್ಟಿಯಲ್ಲಿ ಯುವಕರಿಬ್ಬರ ನಡುವೆ ಗಲಾಟೆ ನಡೆದಿದ್ದು, ಯುವಕನ ಮೂಗನ್ನು ಆತನ ಸ್ನೇಹಿತನೇ ಕಚ್ಚಿ ತುಂಡರಿಸಿದ ಘಟನೆ ಬೆಳ್ತಂಗಡಿಯ ಪಿಲ್ಯ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿಯ ಪಿಲ್ಯ ಗ್ರಾಮದ ಉಲ್ಪೆ ನಿವಾಸಿ ದೀಕ್ಷಿತ್ (28) ಎಂಬವರ ಮೂಗಿಗೆ ಗಾಯಗೊಂಡಿದ್ದು, ಹೊಸ ವರ್ಷದ ಪಾರ್ಟಿಯಲ್ಲಿ ಆತನ ಸ್ನೇಹಿತ ರಾಕೇಶ್ ಮೂಗನ್ನು ಕಚ್ಚಿದ್ದಾನೆಂದು ತಿಳಿದು ಬಂದಿದೆ.
ದೀಕ್ಷಿತ್ ಹಾಗು ರಾಕೇಶ್ ಗೆಳೆಯರಾಗಿದ್ದು, ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮದ್ಯದ ಪಾರ್ಟಿ ಮಾಡಿದ್ದರು. ಈ ನಡವೆ ಕ್ಷುಲ್ಲಕ ವಿಚಾರದಲ್ಲಿ ಅವರಿಬ್ಬರ ನಡುವೆ ಗಲಾಟೆ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿದೆ. ಈ ವೇಳೆ ರಾಕೇಶ್ ದೀಕ್ಷಿತ್‌ನ ಮೂಗನ್ನು ಕಚ್ಚಿ ತುಂಡರಿಸಿದ್ದಾನೆಂದು ಹೇಳಲಾಗಿದೆ.
ದೀಕ್ಷಿತ್ ನನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.




