Crime

ರಾಜ್ಯಕ್ಕೆ ವಿಶೇಷ ಕೊಡುಗೆ ಕೊಟ್ಟಿಲ್ಲ

ಬೀದರ್: ಬಿಜೆಪಿಯ 25 ಸಂಸದರಿದ್ದರೂ ಕೇಂದ್ರ ಸರ್ಕಾರದ ಪ್ರಸಕ್ತ ವರ್ಷದ ಬಜೆಟ್‍ನಲ್ಲಿ ರಾಜ್ಯಕ್ಕೆ ವಿಶೇಷ ಕೊಡುಗೆ ಕೊಟ್ಟಿಲ್ಲ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ಟೀಕಿಸಿದ್ದಾರೆ.
ಕೋವಿಡ್‍ನಿಂದಾಗಿ ಅನೇಕ ಕೈಗಾರಿಕೆಗಳು ಬಾಗಿಲು ಮುಚ್ಚಿವೆ. ಉದ್ಯೋಗ ಕಳೆದುಕೊಂಡ ಪದವೀಧರರು, ಕೂಲಿ ಕಾರ್ಮಿಕರು ನಗರಗಳನ್ನು ತೊರೆದು ಊರು ಸೇರಿದ್ದಾರೆ. ಬಜೆಟ್‍ನಲ್ಲಿ ಉದ್ಯೋಗ ಸೃಷ್ಟಿಗೆ ಹಲವು ಕ್ರಮಗಳನ್ನು ಕೈಗೊಳ್ಳಬಹುದು ಎನ್ನುವ ನಿರೀಕ್ಷೆ ಸಂಪೂರ್ಣ ಹುಸಿಯಾಗಿದೆ ಎಂದು ಹೇಳಿದ್ದಾರೆ.
ಅತಿವೃಷ್ಟಿ, ಅನಾವೃಷ್ಟಿಯಿಂದ ಕಂಗೆಟ್ಟಿರುವ ರೈತರ ಸಾಲ ಮನ್ನಾ ಮಾಡಿಲ್ಲ. ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿಲ್ಲ. ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲಿದ್ದು, ಜನಸಾಮಾನ್ಯರು ತೊಂದರೆ ಅನುಭವಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಬಡವರು, ಮಧ್ಯಮ ವರ್ಗದವರು, ಕೃಷಿ, ಗ್ರಾಮೀಣ ಅಭಿವೃದ್ಧಿಗೆ ಹೇಳಿಕೊಳ್ಳುವಂತಹ ಯೋಜನೆಗಳಿಲ್ಲ. ಸಾರ್ವಜನಿಕ ಕ್ಷೇತ್ರದ ಕಂಪನಿಗಳ ಖಾಸಗೀಕರಣವು ದೇಶಕ್ಕೆ ಮಾರಕವಾಗಲಿದೆ. ಕಾರ್ಪೋರೇಟ್ ವಲಯಕ್ಕೆ ಮಣೆ ಹಾಕಲಾಗಿದೆ. ಜನಸಾಮಾನ್ಯರ ಹಿತ ಕಡೆಗಣಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಕೇಂದ್ರ ಬಜೆಟ್ ನಿರಾಶಾದಾಯಕವಾಗಿದೆ. ಕೋವಿಡ್ ಸಂಕಷ್ಟದಲ್ಲಿ ಜನರ ಕೈಹಿಡಿಯಲಿದೆ ಎನ್ನುವ ಸಾರ್ವಜನಿಕರ ನಂಬಿಕೆ ಸುಳ್ಳಾಗಿದೆ ಎಂದು ಹೇಳಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button