ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲಿಕತ್ವದ ಒನ್ 8 ಕಮ್ಯೂನ್ ಪಬ್ ಮೇಲೆ ಕಬ್ಬನ್ಪಾರ್ಕ್ ಠಾಣೆಯಲ್ಲಿ FIR ದಾಖಲಾಗಿದೆ. ಒನ್ 8 ಕಮ್ಯೂನ್ ಒಂದೇ ಅಲ್ಲದೆ, ಚರ್ಚ್ ಸ್ಟ್ರೀಟ್‌ನಲ್ಲಿರುವ ಎಂಪೈರ್ ರೆಸ್ಟೋರೆಂಟ್, ಬ್ರಿಗೇಡ್ ರಸ್ತೆಯಲ್ಲಿರುವ ಪಾಂಜಿಯೋ ಬಾರ್ ಆ್ಯಂಡ್ ರೆಸ್ಟೋರೆಂಟ್ ಮೇಲೂ ಪ್ರಕರಣ ದಾಖಲಾಗಿದೆ.
ಸರ್ಕಾರ ನಿಗದಿಪಡಿಸಿರುವ ನಿಯಮವನ್ನು ಗಾಳಿಗೆ ತೂರಿ ತಡರಾತ್ರಿ ವರೆಗೂ ಪಬ್ ತೆರೆದು ಪಾರ್ಟಿಗೆ ಅನುವು ಮಾಡಿಕೊಟ್ಟ ರೆಸ್ಟೋರೆಂಟ್, ಬಾರ್, ಪಬ್ ವಿರುದ್ಧ ಜು.6ರ ರಾತ್ರಿ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ, ರಾತ್ರಿ 1.20ರವರೆಗೂ ಪಬ್ ಓಪನ್ ಮಾಡಿದ್ದ ಆರೋಪದಡಿ ನಗರದ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್, ಚರ್ಚ್ ಸ್ಟ್ರೀಟ್‌ನಲ್ಲಿರುವ ಎಂಪೈರ್ ರೆಸ್ಟೋರೆಂಟ್, ಬ್ರಿಗೇಡ್ ರಸ್ತೆಯಲ್ಲಿರುವ ಪಾಂಜಿಯೋ ಬಾರ್ ಆ್ಯಂಡ್ ರೆಸ್ಟೋರೆಂಟ್ ವ್ಯವಸ್ಥಾಪಕರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.