ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ; ಸರ್ಕಾರದ ವಿರುದ್ಧ ಕಿಡಿಕಾರಿದ ಶಾಸಕ ಯತ್ನಾಳ್

ಬೆಂಗಳೂರು: ಪರಿಸರ ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟೀಸ್ ನೀಡಿದ್ದು, ಸರ್ಕಾರದ ಕ್ರಮಕ್ಕೆ ಶಾಸಕ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕರು ರಾಜಕೀಯವಾಗಿ ನನ್ನನ್ನು ಎದುರಿಸಲಾಗದೇ ನಮ್ಮ ಎಥನಾಲ್ ಕಾರ್ಖಾನೆ ಗೆ ನೋಟೀಸ್ ಕೊಡಿಸಿದ್ದಾರೆ. ರೈತರಿಗೆ ನೆರವಾಗಲು ಹಾಗೂ ಹಿಂದುಳಿದ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಸ್ಥಾಪಿಸಲಾಗಿದೆ. ಕಾನೂನು ರೀತಿ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸಲಾಗುವುದು. ಈ ನೋಟೀಸ್, ಆದೇಶಗಳಿಗೆ ಹೆದರುವ ಜಾಯಮಾನ ನನ್ನದಲ್ಲ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಆಡಳಿತದ ವಿರುದ್ಧ ಹೋರಾಡಲು ಶಕ್ತಿ ಇಮ್ಮಡಿಯಾಗಿದೆ. ಕೈಲಾಗದವರ ಕೊನೇ ಅಸ್ತ್ರವೇ ಅಪಪ್ರಚಾರ ಎಂಬುದು ಗೊತ್ತಿರುವ ವಿಷಯ. ಬಡವರಿಗೆ, ದೀನರಿಗೆ, ಪಕ್ಷದ ಕಾರ್ಯಕರ್ತರಿಗೆ ಸಹಾನೂಭೂತಿಯಿಂದ ಕಾಣುತ್ತಾ, ನನ್ನ ಮಿತಿಯಲ್ಲಿ ನನ್ನದೇ ಕಾರ್ಖಾನೆಯಲ್ಲಿ ನೂರಾರು ಜನರಿಗೆ ಉದ್ಯೋಗ ಸೃಷ್ಟಿಸಿದ್ದೇನೆ. ಜಿಲ್ಲೆಯ ಆರ್ಥಿಕತೆ ಸುಧಾರಣೆಯಲ್ಲಿ ನನ್ನ ಅಳಿಲು ಸೇವೆಯೂ ಇದೆ. ರಾಜಕೀಯ ದುರುದ್ದೇಶಕ್ಕೆ ನನ್ನ ಕಾರ್ಖಾನೆ ಮುಚ್ಚಿಸುವುದರಿಂದ ಇವರಿಂದ ಏನೂ ಸಾಧಿಸಲು ಸಾಧ್ಯವಿಲ್ಲ ಎಂದಿದ್ದಾರೆ.

Latest Indian news

Popular Stories