ಕರ್ನಾಟಕ ಜನತೆಯ ಜೇಬುಗಳಿಗೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಕಿಡಿ

ನವದೆಹಲಿ, ಜ.14 – ಅಂತಾರಾಷ್ಟ್ರೀಯ ತೈಲ ದರಗಳಲ್ಲಿ ಹೆಚ್ಚಳವಾಗುವ ಮೂಲಕ ಈ ವಾರದಲ್ಲಿ ಎರಡನೇ ಬಾರಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ನೇರವಾಗಿ 25 ಪೈಸೆ ಹೆಚ್ಚಳವಾಗಿದೆ. ಸಂಕ್ರಾಂತಿ ಸಂಭ್ರಮದಲ್ಲಿದ್ದ ಕರ್ನಾಟಕ ಜನತೆಯ ಜೇಬುಗಳಿಗೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಕಿಡಿ ಬಿದ್ದಿದೆ. ಗುರುವಾರ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 87.30 ರೂ.,ಡೀಸೆಲ್ ಬೆಲೆ ಪ್ರತಿ ಲೀ.ಗೆ 79.40 ಪೈಸೆಯಾಗುವ ಮೂಲಕ ಬಳಕೆದಾರರು 0.25 ಪೈಸೆ ಹೆಚ್ಚು ನೀಡಬೇಕಾಗುತ್ತದೆ ಎಂದು ತೈಲ ಮಾರುಕಟ್ಟೆ ಕಂಪನಿಗಳು ತಿಳಿಸಿವೆ.
ಇತ್ತೀಚಿನ ದಿನಗಳಲ್ಲಿ ವಾರದಲ್ಲಿ ಎರಡರಿಂದ ಮೂರು ಬಾರಿ ಬೆಲೆ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಏರಿಕೆಯಾಗುತ್ತಿರುವುದು ಬಳಕೆದಾರರಲ್ಲಿ ಒಂದು ರೀತಿಯ ಉದ್ವಿಗ್ನತೆ ಮೂಡಿಸಿದೆ.ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 84.70 ರೂ., ಡೀಸೆಲ್ ಪ್ರತಿ ಲೀಟರ್‍ಗೆ 74.88 ರೂ. ಆಗಿದ್ದು, ಇದು ಕಳೆದ ಐದು ದಿನಗಳಲ್ಲಿ ನೇರವಾಗಿ ಏರಿಕೆಯಾದ ದರಗಳಾಗಿವೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಪ್ರ.ಲೀ. 91.32 ಮತ್ತು ಡೀಸೆಲ್ ಪ್ರ.ಲೀ.81.34 ಪೈಸೆಯಾಗಿ ದೇಶದಲ್ಲೇ ಅತ್ಯಧಿಕ ಬೆಲೆ ರುಜುವಾತಾಗಿದೆ.

Latest Indian news

Popular Stories