Crime

ಇಂದು ನೇರ ಫೋನ್ ಇನ್ ಕಾರ್ಯಕ್ರಮ

ರಾಯಚೂರು,ಸೆ30:- ಆಕಾಶವಾಣಿ ಕೇಂದ್ರದ ವತಿಯಿಂದ ಅಕ್ಟೋಬರ್ 1ರ ಗುರುವಾರ ಸಂಜೆ 6.55 ರಿಂದ 7.34ರ ವರೆಗೆ ಜಾನುವಾರುಗಳಲ್ಲಿ ಕೃತಕ ಗರ್ಭಧಾರಣೆ ಮತ್ತು ತಳಿ ಉನ್ನತಿಕರಣ ಕುರಿತು ನೇರ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ರಾಯಚೂರು ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಶಿವಣ್ಣ ರೈತರಿಗೆ ಮಾಹಿತಿ ನೀಡಲಿದ್ದಾರೆ. ಆಕಾಶವಾಣಿ ರಾಯಚೂರು ಕೇಂದ್ರದ ದೂ.ಸಂ.9449817322 ಅಥವಾ 08532-223365ಗೆ ಕರೆಮಾಡಿ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಯಕ್ರಮ ನಿರ್ವಾಹಕ ಡಾ. ವಿ.ಜಿ. ಬಾವಲತ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button