ವಾಹನ ತಪಾಸಣೆ ಮಾಡ್ತಿದ್ದ ಪೊಲೀಸ್ ಗೆ ಕಾರ್ ಡಿಕ್ಕಿ; ಪೇದೆಗೆ ಗಾಯ

ತೆಲಂಗಾಣ : ಪೊಲೀಸರ ಕಾರ್ಯಾಚರಣೆ ವೇಳೆ ಕಾರ್ ಡಿಕ್ಕಿಯಾಗಿ ಪೊಲೀಸ್ ಪೇದೆಯೊಬ್ಬರು ಗಾಯಗೊಂಡಿದ್ದಾರೆ.ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಕಾನ್ಸ್ ಟೇಬಲ್ ರಸ್ತೆಯ ಮಧ್ಯದಲ್ಲಿ ನಿಂತು ವೇಗವಾಗಿ ಬಂದ ಕಾರನ್ನು ನಿಲ್ಲಿಸಲು ಸೂಚಿಸಿದರು. ಆದರೆ ಚಾಲಕ ಅವರ ಆದೇಶವನ್ನು ನಿರ್ಲಕ್ಷಿಸಿ ಕಾರ್ ಡಿಕ್ಕಿ ಹೊಡೆಸಿ ವೇಗವಾಗಿ ವಾಹನ ಚಲಾಯಿಸಿದ್ದಾನೆ.

ಗಾಯಗೊಂಡಿದ್ದ ಕಾನ್ ಸ್ಟೇಬಲ್ ಮಹೇಶ್ ಅವರನ್ನು ಅಲ್ಲಿದ್ದ ಇತರ ಪೊಲೀಸ್ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸಿದ್ದು ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ದೃಶ್ಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದ್ದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Latest Indian news

Popular Stories