
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ Post Matric Scholarship
ಬೀದರ ಏಪ್ರೀಲ್ ೨೩ (ಕರ್ನಾಟಕ ವಾರ್ತೆ):Post Matric Scholarship ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ೨೦೨೦-೨೧ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್-೩೦ ಕೊನೆಯ ದಿನಾಂಕ ಇರುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್: www.ssp.postmatric.karnataka.gov.in ಇಲಾಖಾ ಸಹಾಯವಾಗಿ ದೂರವಾಣ ಸಂಖ್ಯೆ: 8050770005 / 8050770004 ಮತ್ತು ಇಮೇಲ್ ವಿಳಾಸ: [email protected] ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣ ಇಮೇಲ್: [email protected] ಎಂದು ಪ್ರಕಟಣೆ ತಿಳಿಸಿದೆ.




