
ಅನ್ನದಾತರನ್ನು ಗುಲಾಮರನ್ನಾಗಿ ಮಾಡಿದ ಕೇಂದ್ರ ಸರ್ಕಾರ-ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ
ಬೀದರ್,ಅ.5:- ಅನ್ನದಾತರನ್ನು ಗುಲಾಮರನ್ನಾಗಿ ಮಾಡಲು ಕೇಂದ್ರ ಸರ್ಕಾರ ರೈತ ಮತ್ತು ಕಾರ್ಮಿಕ ವಿರೋಧಿ ಕಾನೂನುಗಳನ್ನು ಜಾರಿಗೆ ತಂದಿದ್ದು, ಇದನ್ನು ವಿರೋಧಿಸಿ ರೈತರೇ ಬಿದಿಗಿಳಿದು ಹೋರಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ.
ಅವರು ಇಂದು ಬೀದರ್ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕರೆದ ಸುದ್ದಿಗೊಷ್ಠಿಯಲ್ಲಿ ಕೋವಿಡ್-19 ನಿಯಂತ್ರಣದಲ್ಲಿ ವಿಫಲತೆ, ಆರ್ಥಿಕತೆ ಕುಸಿದಿದೆ. ಇನ್ನೊಂದೆಡೆ ಉತ್ತರ ಪ್ರದೇಶದಲ್ಲಿ ಅತ್ಯಾಚಾರದಂಥ ಘಟನೆಗಳಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಂತ್ರಸ್ತ ಮಹಿಳೆ ಪರ ನ್ಯಾಯಕ್ಕಾಗಿ ಹೋರಾಡುತ್ತಿರುವ ರಾಹುಲ್ ಗಾಂಧಿ ಮತ್ತು ಪ್ರಿಯಂಕಾ ಗಾಂಧಿಗೆ ಅಡ್ಡಪಡಿಸಲಾಗುತ್ತಿದೆ. ದೇಶದಲ್ಲಿ ಜಂಗಲ್ ರಾಜ್ ನಡೆಯುತ್ತಿದೆ ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸಲು ಬಿಜೆಪಿ ಯೋಗ್ಯ ಇಲ್ಲ.
ರಾಜ್ಯದಲ್ಲಿ ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ, ಈಗ ಉಪ ಚುನಾವಣೆಯಲ್ಲೂ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಹಿಂಬಾಗಿಲು ಮೂಲಕ ಗೆಲ್ಲಲು ಹೊರಟಿದೆ. ಆದರೆ, ಸರ್ಕಾರದ ದುರಾಡಳಿತ, ವೈಫಲ್ಯದಿಂದ ಬೇಸತ್ತಿರುವ ಜನ ಈಗ ಎಚ್ಚೆತ್ತುಕೊಂಡಿದ್ದು, ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯ ಗಳಿಸುವುದು ನಿಶ್ಚಿತ.
ಬಿಜೆಪಿ ಸರ್ಕಾರದ ಕುಮ್ಮಕ್ಕು: ನಿರ್ದೇಶನದಂತೆ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ನಡೆದಿದ್ದು, ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಉಪ ಚುನಾವಣೆಯಲ್ಲಿ ಸೋಲಿನ ಭೀತಿ ಹಾಗೂ ತಮ್ಮ ಆಡಳಿತ ವೈಫಲ್ಯಗಳನ್ನು ಮುಚ್ಚಿಕೊಂಡು ಜನರ ಗಮನ ಬೇರೆಡೆಗೆ ಸೆಳೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದೆ. ಈ ದಾಳಿಯನ್ನು ಕಾನೂನು ಹೋರಾಟ ಮೂಲಕವೇ ಎದುರಿಸಿ ನ್ಯಾಯ ಪಡೆಯುತ್ತೇವೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ದತ್ತು ಮುಲಗೆ, ಎಂ.ಎ. ಸಮಿ ಉಪಸ್ಥಿತಿರದ್ದರು.




