ಪುಣೆಯ ‘ಪಿಂಪ್ರಿ ಕ್ಯಾಂಡಲ್ ಫ್ಯಾಕ್ಟರಿ’ಯಲ್ಲಿ ಭೀಕರ ಬೆಂಕಿ : 6 ಮಂದಿ ದುರ್ಮರಣ , 8 ಜನರಿಗೆ ಗಾಯ

ಮಹಾರಾಷ್ಟ್ರದ ಪುಣೆಯ ಪಿಂಪ್ರಿ ಚಿಂಚ್ವಾಡ್ ಪ್ರದೇಶದ ಮೇಣದಬತ್ತಿ ಉತ್ಪಾದನಾ ಘಟಕದಲ್ಲಿ ಶುಕ್ರವಾರ ಬೆಂಕಿ ಅವಘಡ ಸಂಭವಿಸಿದ್ದು, ಈ ದುರಂತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ.

ಮಧ್ಯಾಹ್ನ 2.45 ರ ಸುಮಾರಿಗೆ ತಲವಾಡೆಯಲ್ಲಿರುವ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿದೆ ಎಂದು ಪಿಂಪ್ರಿ-ಚಿಂಚ್ವಾಡ್ ಮುನ್ಸಿಪಲ್ ಕಮಿಷನರ್ ಶೇಖರ್ ಸಿಂಗ್ ತಿಳಿಸಿದ್ದಾರೆ.ಕಾರ್ಖಾನೆಯು ಹೊಳೆಯುವ ಮೇಣದಬತ್ತಿಗಳನ್ನ ತಯಾರಿಸುತ್ತಿದ್ದು, ಇದನ್ನು ಸಾಮಾನ್ಯವಾಗಿ ಹುಟ್ಟುಹಬ್ಬದ ಆಚರಣೆಗೆ ಬಳಸಲಾಗುತ್ತದೆ ಎಂದು ಹೇಳಿದರು.

Latest Indian news

Popular Stories