Crime
ರಾಯಚೂರು: ಚುನಾವಣೆ: ನಿಷೇಧಾಜ್ಞೆ ಜಾರಿ
ರಾಯಚೂರು,ಅ.15:- ವಿಧಾನ ಪರಿಷತ್ ಈಶಾನ್ಯ ಕರ್ನಾಟಕ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಮತದಾನ ಕೇಂದ್ರಗಳ ಸುತ್ತ ಜಿಲ್ಲೆಯಲ್ಲಿ 2020 ಅ.27ರ ಬೆಳಿಗೆ 6 ಗಂಟೆಯಿಂದ ಅ.28ರ ಮಧ್ಯರಾತ್ರಿ 12 ಗಂಟೆಯವರೆಗೆ ಸಿ.ಆರ್.ಪಿ.ಸಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಮತದಾನ ಕೇಂದ್ರ ಸ್ಥಾಪಿಸಿರುವ 5 ಕಿ.ಮೀ ವ್ಯಾಪ್ತಿಯಲ್ಲಿ ಕರ್ನಾಟಕ ಅಬಕಾರಿ ಸನ್ನದುಗಳು (ಸಾಮಾನ್ಯ ಷರತ್ತುಗಳು) ನಿಯಮಗಳು 1967 ನಿಯಮ-10 ಬಿ ರಂತೆ ಪ್ರದತ್ತವಾದ ಅಧಿಕಾರ ಚಲಾಯಿಸಿ ಎಲ್ಲ ತರಹದ ಮದ್ಯ ಮಾರಾಟ ನಿಷೇಧಿಸಿ ಆದೇಶಿಸಲಾಗಿದೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




