ಕರ್ನಾಟಕ, ಮಹಾರಾಷ್ಟ್ರ ಮತ್ತು ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಮಳೆ ಸಾಧ್ಯತೆ

ನವದೆಹಲಿ, ನವೆಂಬರ್‌ 25: ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಮಹಾರಾಷ್ಟ್ರ ಮತ್ತು ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ.

ಗುಜರಾತ್ ಮತ್ತು ಮಹಾರಾಷ್ಟ್ರದ ಕರಾವಳಿಯಲ್ಲಿ ಗುಡುಗು ಸಹಿತಿ ಮಳೆ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.ಗುಜರಾತ್‌ನ ಆಗ್ನೇಯ ತುದಿ, ವಾಯುವ್ಯ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ನೈಋತ್ಯ ತುದಿಯಲ್ಲಿ ಭಾರೀ ಮಳೆಯಾಗಲಿದೆ.ಮುಂದಿನ ಕೆಲವು ದಿನಗಳಲ್ಲಿ ತೆಲಂಗಾಣದಲ್ಲಿ ಮಳೆಯು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ನಂತರ ರಾಜ್ಯದಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶುಕ್ರವಾರದಂದು ಹೈದರಾಬಾದ್‌ನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿಯಲ್ಲಿ ಸ್ವಲ್ಪ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಉತ್ತರ, ಮಧ್ಯ ತೆಲಂಗಾಣ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಸ್ವತಂತ್ರ ಹವಾಮಾನ ತಜ್ಞ ಟಿ ಬಾಲಾಜಿ ತಿಳಿಸಿದ್ದಾರೆ.

Latest Indian news

Popular Stories