ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ನೆಲಕಚ್ಚಲಿದೆ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ

ರಾಯಚೂರು :ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ನೆಲಕಚ್ಚಲಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ಪತನವಾಗುವುದು ಖಂಡಿತ ಕಾಂಗ್ರೆಸ್ ನಲ್ಲಿ ಒಳಜಗಳ ಹೆಚ್ಚಾಗಿ ಸರ್ಕಾರ ಬೀಳುತ್ತೆ ಕಾಂಗ್ರೆಸ್ಎಂ ಲೀಡರ್ದು ಗಳು ಸರಿ ಇಲ್ಲ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ದೇಶದಲ್ಲಿ ಕಾಂಗ್ರೆಸ್ ಸರಕಾರ ನೆಲಕಚ್ಚಿತ್ತು.ಗ್ಯಾರಂಟಿ ಅಂತ ಹೇಳಿ ಕಾಂಗ್ರೆಸ್ ಸರಕಾರ ಜನರಿಗೆ ಮೋಸ ಮಾಡಿದೆ. ಗ್ಯಾರಂಟಿ ಯೋಜನೆ ಇಲ್ಲದೆ ಕಾಂಗ್ರೆಸ್ ಅಧಿಕಾರ ಹಿಡಿದು ತೋರಿಸಲಿ. ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಹೀಗಾಗಿ ಸರ್ಕಾರ ಪತನವಾಗುವುದು ಗ್ಯಾರಂಟಿ ಎಂದರು.

Latest Indian news

Popular Stories