
Crime
ಚಂಡೀಗಡ :ಮನೆಯೊಂದರ ಫ್ರಿಡ್ಜ್ ಕಂಪ್ರೆಸ್ಸರ್ ಸ್ಪೋಟಗೊಂಡು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತ್ಯು
ಚಂಡೀಗಢ :ಮನೆಯೊಂದರ ಫ್ರಿಡ್ಜ್ ಕಂಪ್ರೆಸ್ಸರ್ ಸ್ಪೋಟಗೊಂಡು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಪಂಜಾಬ್‌ನ ಜಲಂಧರ್‌ನಲ್ಲಿ ಎಂಬಲ್ಲಿ ನಡೆದಿದೆ.
ನಗರದ ಅವತಾರ್ ನಗರ ಪ್ರದೇಶದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಸ್ಫೋಟದ ನಂತರ ಮನೆಗೆ ಬೆಂಕಿ ಹೊತ್ತಿಕೊಂಡಿದೆ.
ದುರಂತದಲ್ಲಿ ಮೃತರಾದವರನ್ನು ಯಶಪಾಲ್ ಘಾಯ್ (70), ರುಚಿ ಘಾಯ್ (40), ಮನ್ಶಾ (14), ದಿಯಾ (12) ಮತ್ತು ಅಕ್ಷಯ್ (10) ಎಂದು ಗುರುತಿಸಲಾಗಿದೆ.
ಜಲಂಧರ್ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟೋತ್ತಿಗಾಗಲೇ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.




