ಉಪನೋಂದಣಾಧಿಕಾರಿ ಕಚೇರಿ ಕೆಲಸದ ಅವಧಿ ವಿಸ್ತರಣೆ: ಸೆಪ್ಟೆಂಬರ್ 30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಓಪನ್

ಬೆಂಗಳೂರು: ಉಪನೋಂದಣಾಧಿಕಾರಿ ಕಚೇರಿಗಳು ಶನಿವಾರ (ಸೆ.23) ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆ ವರೆಗೂ ಕಾರ್ಯ ನಿರ್ವಹಿಸಲಿವೆ.

2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ನೋಂದಣಿ ಮಾಡಿಸುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಇಂದಿನಿಂದ ಸೆ.30ರವರೆಗೆ ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿ ಅವಧಿಯನ್ನು ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ವಿಸ್ತರಣೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ.

ಈ ಕುರಿತಾಗಿ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತೆ ಬಿಆರ್​ ಮಮತಾ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಕಚೇರಿ ಕಾರ್ಯನಿರ್ವಹಣಾ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದೆ.

ಸೆಪ್ಟೆಂಬರ್ 23 ನಾಲ್ಕನೇ ಶನಿವಾರದಂದೂ ಕೂಡ ಈ ಕಾರ್ಯ ನಿರ್ವಹಣೆ ಇರಲಿದ್ದು, ಹೆಚ್ಚುವರಿ ಕೆಲಸದ ಅವಧಿ ಸೆ. 30 ರವರೆಗೆ ಮಾತ್ರ ಅನ್ವಯ ಆಗಲಿದೆ ಎಂದು ತಿಳಿಸಲಾಗಿದೆ.

Latest Indian news

Popular Stories