CrimeDakshina Kannada

ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಬೆದರಿಕೆ ಆರೋಪ – ರೌಡಿ ಶೀಟರ್ ಬಂಧನ

ಮಂಗಳೂರು, ಆ.15: ಪೊಲೀಸ್ ಸಿಬ್ಬಂದಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಖ್ಯಾತ ರೌಡಿ ಶೀಟರ್ ಪುನಿತ್ ಶೆಟ್ಟಿ (35) ಎಂಬಾತನನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

ಪುನಿತ್, ಅಪಘಾತಕ್ಕೆ ಸಂಬಂಧಿಸಿದಂತೆ ಉರ್ವಾ ಪೊಲೀಸ್ ಠಾಣೆಗೆ ಕರೆ ಮಾಡಿದ್ದರು.

ದೂರವಾಣಿಯಲ್ಲಿ ಮಾತನಾಡುತ್ತಿದ್ದಾಗ ಆಕ್ರೋಶಗೊಂಡು ಪೊಲೀಸರಿಗೆ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ಆರೋಪಿಯಿಂದ ಪೊಲೀಸರು ಪಿಸ್ತೂಲ್ ಮತ್ತು ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಪುನಿತ್ ಖ್ಯಾತ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಬರ್ಕೆ, ಪಾಂಡೇಶ್ವರ, ಬಂದರ್, ಉರ್ವ ಮತ್ತು ಕಂಕನಾಡಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button