ರೌಡಿಶೀಟರ್ ಭೀಕರ ಹತ್ಯೆ

ಕಲಬುರಗಿ: ತಾಲೂಕಿನ ಪಟ್ಟಣ ಗ್ರಾಮದಲ್ಲಿ ರೌಡಿಶೀಟರ್ ಓರ್ವನನ್ನು ಭೀಕರ ಹತ್ಯೆ ಮಾಡಿದ ಘಟನೆ ಮಂಗಳವಾರ(ನ.12) ನಡೆದಿದೆ.

ಪಟ್ಟಣ ಗ್ರಾಮದ ಸೋಮು ತಾಳಿಕೋಟಿ(40) ಎಂಬಾತನೇ ಕೊಲೆಯಾಗಿರುವ ರೌಡಿಶೀಟರ್. ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು ಆಳಂದ ರಸ್ತೆಯ ರೈಲ್ವೆ ಹಳಿ ಸಮೀಪ ಶವವನ್ನು ಬಿಸಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರೌಡಿಶೀಟರ್ ಸೋಮು ತಾಳಿಕೋಟಿ ಕೆಲ ತಿಂಗಳ ಹಿಂದೆ ಪಟ್ಟಣ ಗ್ರಾಮದ ಡಾಬಾ ಮಾಲೀಕರೊಂದಿಗೆ ಗಲಾಟೆ ಮಾಡಿಕೊಂಡಿದ್ದನು. ಆ ಸಂದರ್ಭದಲ್ಲಿ ಡಾಬಾ ಮಾಲೀಕನನ್ನು ಸೋಮು ಆಂಡ್ ಗ್ಯಾಂಗ್ ಹಲ್ಲೆ ನಡೆಸಿತ್ತು. ಇದೇ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Latest Indian news

Popular Stories