ವಿಡಿಯೋ ಮತ್ತು ಫೋಟೋ ಆದರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ – ಎಸ್. ಪಿ ಮಿಥುನ್ ಕುಮಾರ್

ಶಿವಮೊಗ್ಗ :ರಾಗಿ ಗುಡ್ಡದಲ್ಲಿ 144 ಸೆಕ್ಷನ್ ಜಾರಿಯಾಗಿದ್ದು ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 60 ಜನರನ್ನು ಪೊಲೀಸರು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಶಿವಮೊಗ್ಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಗಲಾಟೆಯ ಕುರಿತು ಮಾತನಾಡಿದ್ದು ಘಟನೆ ಸಂಬಂಧಿಸಿ ದಂತೆ ಎಂಟು ಜನರು ತಲೆಮರಿಸಿಕೊಂಡಿದ್ದಾರೆ ಈಗಾಗಲೇ 60 ಜನರ ವಿಚಾರಣೆ ಮಾಡಲಾಗಿದೆ ಶಿವಮೊಗ್ಗದ ರಾಗಿಗುಡ್ಡದಲ್ಲಿ 144 ಸೆಕ್ಷನ್ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.

ಶಿವಮೊಗ್ಗದಲ್ಲಿ ನಿಷೇಧಾಗ್ನಿ ಇದ್ರೂ ವ್ಯಾಪಾರ ವಹಿವಾಟಿಗೆ ಯಾವುದೇ ಸಮಸ್ಯೆ ಇಲ್ಲ ವಿಡಿಯೋ ಮತ್ತು ಫೋಟೋ ಆದರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ ಯಾರು ಕೂಡ ಭಯಪಡುವ ಅವಶ್ಯಕತೆ ಇಲ್ಲ ಪೊಲೀಸ್ ರನ್ನು ನಿಯೋಜನೆ ಮಾಡಲಾಗಿದೆ.ಶಿವಮೊಗ್ಗ ನಗರದಲ್ಲಿ ಎಲ್ಲೂ ಕೂಡ ಅಂಗಡಿ ಬಂದ್ ಮಾಡಿಸಿಲ್ಲ ಕಲ್ಲುತೂರಾಟ ಮಾಡಿದವರ ವಿರುದ್ಧ ಕಾನೂನು ರೀತಿಯಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಎಸ್ ಪಿ ಮಿಥುನ್ ಕುಮಾರ್ ಅವರು ಮಾಹಿತಿ ನೀಡಿದರು.

Latest Indian news

Popular Stories