
Crime
ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ಗೆ ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’
ಬೆಂಗಳೂರು:ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದೆ.ರಾಜ್ಯ ಸರ್ಕಾರದಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದಂತ 68 ಗಣ್ಯರಿಗೆ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂಬುದಾಗಿ ಪಟ್ಟಿಯನ್ನು ಪ್ರಕಟಿಸಿದೆ.
ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಾಳಿಯನ್ನು ಹೊರಡಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸ್ಲಲಿಸಿರುವ ಗಣ್ಯ ವ್ಯಕ್ತಿಗಳಿಗೆ ಪ್ರತಿ ವರ್ಷವೂ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪ್ರದಾಯವನ್ನ ಸರ್ಕಾರವು ಅನುಸರಿಸಿಕೊಂಡು ಬಂದಿರುತ್ತದೆ.




