
Crime
ಜೇನುತುಪ್ಪ ಆಯುರ್ವೇದ ಔಷಧಕ್ಕೆ ಅದ್ಭುತ ಶಕ್ತಿ; ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ
ಪುತ್ತೂರು, ಅ.3 (ಯುಎನ್‍ಐ):- ಆಯುರ್ವೇದ ಔಷಧ ಪದ್ಧತಿಯಲ್ಲಿ ಹಲವಕ್ಕೆ ಜೇನುತುಪ್ಪ ಬೇಕೇ ಬೇಕು. ಇದರಲ್ಲಿ ಅಷ್ಟು ಅದ್ಭುತ ಶಕ್ತಿ ಇದೆ. ಹೀಗಾಗಿ ಇದಕ್ಕೆ ತನ್ನದೇ ಆದ ಮಹತ್ವವಿದೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದ ಗೌಡ ತಿಳಿಸಿದ್ದಾರೆ.
ಪುತ್ತೂರಿನ ದಕ್ಷಿಣ ಕನ್ನಡ ಜೇನು ವ್ಯವಹಾರಗಳ ಸಹಕಾರಿ ಸಂಘ ನಿಗಮದಲ್ಲಿ ನೂತನ ಆಡಳಿತ ಕಚೇರಿ ಹಾಗೂ ಸಭಾ ಭವನವನ್ನು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸದಾನಂದ ಗೌಡ, ಜೇನುನೊಣಗಳಿಂದಲೂ ಪರಿಸರಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ. ಶೇ.85 ರಷ್ಟು ಪರಾಗಸ್ಪರ್ಶವಾಗುವುದರಿಂದ ಇತರ ಬೆಳೆಗಳಿಗೂ ಅನುಕೂಲವಾಗುತ್ತಿದೆ ಎಂದು ಸದಾನಂದ ಗೌಡ ತಿಳಿಸಿದರು.



