Crime
ಅ. 4 ರಂದು ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿ
ರಾಯಚೂರು,ಅ02:- ಇದೇ ಅ.4ರಂದು ಟಿಇಟಿ ಪರೀಕ್ಷೆಯು ರಾಯಚೂರು ಹಾಗೂ ಶಕ್ತಿನಗರ ಸೇರಿದಂತೆ ಒಟ್ಟು 27 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಈ ಪರೀಕ್ಷಾ ಕೇಂದ್ರಗಳಲ್ಲಿ ನಕಲು ಹಾಗೂ ಯಾವುದೇ ರೀತಿಯ ಅವ್ಯವಹಾರ ನಡೆಯುವುದನ್ನು ತಡೆಗಟ್ಟುವ ಉದ್ದೇಶದಿಂದ ಹಾಗೂ ಕಾನೂನು ಮತ್ತು ಸುವವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಯಾವುದೇ ಅಹಿತರಕ ಘಟನೆಗಳು ಜರುಗದಂತೆ ಅ.4ರಂದು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಸುತ್ತಮುತ್ತ 200 ಮೀಟರ್ ಸುತ್ತುವರೆದ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಈ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಕೆಲವು ಷರತ್ತುಗಳಿಗೆ ಒಳಪಟ್ಟು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.




