ಸೆಕ್ಸ್ ವಿಡಿಯೋ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​ಗೆ ಪ್ರಜ್ವಲ್ ರೇವಣ್ಣ ಅರ್ಜಿ

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಅಮಾನತುಗೊಂಡಿರುವ ಜೆಡಿಎಸ್ ಮುಖಂಡ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬುಧವಾರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಅಶ್ಲೀಲ ವಿಡಿಯೋ ಬಹಿರಂಗವಾದ ಬಳಿಕ ವಿದೇಶಕ್ಕೆ ಪಲಾಯನ ಮಾಡಿರುವ ಪ್ರಜ್ವಲ್ ರೇವಣ್ಣ, ಮೇ 31 ರಂದು ಬೆಂಳೂರಿಗೆ ವಾಪಸ್ ಬರುವುದಾಗಿ ಇತ್ತೀಚೆಗಷ್ಟೇ ವಿಡಿಯೋ ಬಿಡುಗಡೆ ಮಾಡಿ, ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿಲು ಎಸ್ಐಟಿ ಸಿದ್ಧತೆ ನಡೆಸಿದ್ದು, ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ.

ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ತಮ್ಮ ವಿರುದ್ಧ ಸಿಐಡಿ ಠಾಣೆ, ಹೊಳೆನರಸೀಪುರ ಠಾಣೆ, ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾದ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.

ಪ್ರಜ್ವಲ್ ರೇವಣ್ಣ ತಮ್ಮ ವಕೀಲರ ಮೂಲಕ ರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಮೇ 31 ರಂದು ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರುತ್ತಿದ್ದಾರೆ. ಹೀಗಾಗಿ ನಾಳೆಯೇ ಅರ್ಜಿ ಅರ್ಜಿಗಳ ವಿಚಾರಣೆ ಮಾಡುವಂತೆ ಪ್ರಜ್ವಲ್ ಪರ ವಕೀಲರು ಮನವಿ ಮಾಡಿದರು.

ಆದರೆ ನಾಳೆ ವಿಚಾರಣೆ ಸಾಧ್ಯವಿಲ್ಲ ಎಂದ ಕೋರ್ಟ್, ಈ ಸಂಬಂಧ ಎಸ್ಐಟಿಗೆ ನೋಟಿಸ್ ನೀಡಿ, ವಿಚಾರಣೆಯನ್ನು ಮೇ 31ಕ್ಕೆ ನಿಗದಿಪಡಿಸಿದೆ.

ಕಳೆದ ಒಂದು ತಿಂಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ, ಮೇ 31ರಂದು ಬೆಳಗ್ಗೆ 10 ಗಂಟೆಗೆ ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗುವುದಾಗಿ ಹೇಳಿ ಇತ್ತೀಚೆಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು. ಅಲ್ಲದೆ ಜರ್ಮಿನಿಯಿಂದ ಬೆಂಗಳೂರಿಗೆ ಬರಲು ಲುಫ್ತಾನ್ಸಾ ಏರ್​ಲೈನ್ಸ್​ನಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್​ ಬುಕ್ ಮಾಡಿದ್ದಾರೆ.

Latest Indian news

Popular Stories